ಬಂಟ್ವಾಳ, ಜ 24: ಜನವರಿ 23ರ ಮಂಗಳವಾರ ನಡೆದ ಪರಿವರ್ತನಾ ಯಾತ್ರೆಯ ಕಾರ್ಯಕ್ರಮದಲ್ಲಿ , ಬಂಟ್ವಾಳದಲ್ಲಿ ರಮಾನಾಥ ರೈ ಮತ್ತು ರಾಜೇಶ್ ನಾಯ್ಕ್ ನಡುವೆ ಚುನಾವಣೆ ನಡಿತಾ ಇಲ್ಲ ಬದಲಾಗಿ ರಾಮ ವರ್ಸಸ್ ಅಲ್ಲಾಹುವಿನ ನಡುವೆ ಚುನಾವಣೆ ನಡಿತಾ ಇದೆ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಸುನಿಲ್ ಕುಮಾರ್ ವಿರುದ್ದ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಶಾಂತ್ ಕುಲಾಲ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುನಿಲ್ ಕುಮಾರ್ ಧಾರ್ಮಿಕ ಭಾವನೆ ಕೆರಳುವಂತೆ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.