ಉಡುಪಿ, ಜ.04 (Daijiworld News/PY) : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಶನಿವಾರ ನಡೆದಿದೆ.
ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ರೈತರ ಕೋರಿಕೆಯನ್ನು ಆಲಿಸದೇ ಇದ್ದ ಕಾರಣ ಕೋಪಗೊಂಡ ರೈತರು ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿ ಕಛೇರಿ ಆವರಣದೊಳಗೆ ನುಗ್ಗಿದ್ದಾರೆ.
ಜಿಲ್ಲಾಧಿಕಾರಿ ಕಛೇರಿಯ ಆವರಣದೊಳಗೆ ಪ್ರವೇಶಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ವಿರುದ್ದ ಧಿಕ್ಕಾರ ಹಾಕಿದ್ದು, ಪ್ರತಿಭಟನಾಕಾರರನ್ನು ಆವರಣದೊಳಗೆ ಪ್ರವೇಶಿಸಲು ಬಿಟ್ಟ ಕಾರಣ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಳಿಕ ಪ್ರತಿಭಟನಾಕಾರರನ್ನು ಆವರಣದಿಂದ ಹೊರಕ್ಕೆ ಕಳುಹಿಸಲಾಯಿತು. ನಂತರ ಆವರಣದ ಹೊರಗೆ ಕಾದು ಕುಳಿತ ಪ್ರತಿಭಟನಾಕಾರರ ಬಳಿಗೆ ಬಂದ ಜಿಲ್ಲಾಧಿಕಾರಿಗಳು ರೈತರ ಕೋರಿಕೆಯನ್ನು ಸ್ವೀಕರಿಸಿದರು.
ರೈತರು ಸುಮಾರು 18 ಬೇಡಿಕೆಗಳನ್ನು ಈಡೆರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.