ಮಂಗಳೂರು, ಜ 26: ಪ್ರತಿಷ್ಠಿತ ಆಳ್ವಾಸ್ ಕಾಲೇಜಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ರಚನಾ ಅತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಚಿತ್ರದುರ್ಗ ಮೂಲದ ಈಕೆ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಕಾಲೇಜಿನ 5ನೇ ಮಹಡಿಯಿಂದ ಜಿಗಿದು ರಚನಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವುದು ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಮೊದಲು ರಚನಾ ಡೆತ್ ನೋಟ್ ಬರೆದಿಟ್ಟಿದ್ದು, ಕಡಿಮೆ ಅಂಕ ಪಡೆದಿರುವುದು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ತಿಳಿಸಿದ್ದಾಳೆ. ಪೊಲೀಸರು ಪ್ರಾಥಮಿಕ ಮಾಹಿತಿಯಲ್ಲಿ ಡೆತ್ ನೋಟ್ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.