ಮಂಗಳೂರು, ನ.19 (DaijiworldNews/AK):ಮಂಗಳೂರು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ, ನವೆಂಬರ್ 19 ರಂದು ಅಧಿಕಾರ ಸ್ವೀಕರಿಸಿದರು.


ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು.
ಕರ್ನಾಟಕ ಸರ್ಕಾರ ನವೆಂಬರ್ 18 ರಂದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವಾರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಹೊಸ ಹುದ್ದೆಗಾಗಿ ಕಾಯುತ್ತಿದ್ದ ಶಶಿಕುಮಾರ್ ಅವರನ್ನು ಪಶ್ಚಿಮ ವಲಯದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಅವರು ಈ ಹಿಂದೆ ಮಂಗಳೂರು ನಗರ ಮತ್ತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಹೊಸ ಹುದ್ದೆಯಲ್ಲಿ ಮಂಗಳೂರಿಗೆ ಅಗಮಿಸಿರುವುದು ಅವರ ಪೊಲೀಸ್ ವೃತ್ತಿಜೀವನದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿಯಾಗಿದೆ.