ಉಡುಪಿ, ನ.19 (DaijiworldNews/TA): ಉಡುಪಿಯಲ್ಲಿ ನಡೆಯಲಿರುವ ಶ್ರೀ ಶಂಕರ ವಿಜಯೋತ್ಸವ 2026ರ ಅಂಗವಾಗಿ ಆರಂಭೋತ್ಸವ ಕಾರ್ಯಕ್ರಮವನ್ನು ನವೆಂಬರ್ 22ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದೆ.

ಶೃಂಗೇರಿ ಶಾರದಾ ಪೀಠದ ಶಿಷ್ಯ ವರ್ಗ ಹಾಗೂ ಅಭಿಮಾನಿ ಬಳಗದವರ ಸಹಕಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಭಾನುವಾರ ಸಂಜೆ 4 ಗಂಟೆಗೆ ಮಂಗಳೂರಿನ ಶರವು ದೇವಸ್ಥಾನದ ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದ ಬಾಳಂ ಭಟ್ ಹಾಲ್ನಲ್ಲಿ ನಡೆಯಲಿದೆ.
ಡಿಸೆಂಬರ್ 28, 29 ಮತ್ತು 30ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಕ್ರೀಡಾಂಗಣದಲ್ಲಿ ಶ್ರೀ ಶಂಕರ ವಿಜಯೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಡೆಯುವ ಆರಂಭೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.