ಬೆಳ್ತಂಗಡಿ, ನ.19 (DaijiworldNews/AK): ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ನೀರಿನ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ಸಂತೆಕಟ್ಟೆ ಬಳಿ ಗುರುವಾರ ನಡೆದಿದೆ.

ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಕಾರು ಹೋಗುತ್ತಿದ್ದಾಗ ಹೆದ್ದಾರಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ನೀರಿನ ಟ್ಯಾಂಕರ್ ಸಂತೆಕಟ್ಟೆ ಬಳಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಡಿಕ್ಕಿಯ ಪರಿಣಾಮ ಕಾರು ತೀವ್ರವಾಗಿ ನಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆಯಿಂದ ಸ್ವಲ್ಪ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.