ಬಂಟ್ವಾಳ, ನ.19 (DaijiworldNews/AK): ಮಾಣಿ ಬಳಿಯ ನೇರಳಕಟ್ಟೆಯಲ್ಲಿ ಗುರುವಾರ ಸಂಜೆ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಾಣಿ ಬಳಿಯ ನೇರಳಕಟ್ಟೆಯಲ್ಲಿ ಗುರುವಾರ ಸಂಜೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ ಎಂದು ಗುರುತಿಸಲಾಗಿದೆ.
ಫಾತಿಮಾ ಶಾಲೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿರುವಾಗ ಮಾಣಿ ಕಡೆಯಿಂದ GJ-27-TD-3022 ನೇ ನೊಂದಣಿಯ ಲಾರಿಯನ್ನು ಅದರ ಚಾಲಕ
ಗುಜರಾತ್ ಅರುವಳ್ಳಿ ನಿವಾಸಿ ಕೊಕಾಡಿ ಮೊಹಮ್ಮದ್ ಜನಾಫ್ ರೆಹಮಾನ್ಬಾಯ್ (30) ಎಂಬಾತನು ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿ ವೈದ್ಯರು ಪರೀಕ್ಷಿಸಿ ಬಾಲಕಿ ಮೃತಪಟ್ಟಿರುವುದಾಗಿ ಧೃಢಪಡಿಸಿದ್ದಾರೆ. , ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.