ಉಡುಪಿ, ಜ 17 (Daijiworld News/MSP): ಮಲ್ಪೆ ಮೀನುಗಾರಿಕಾ ಬಂದರಿನಲ್ಲಿದ್ದ ಗದಗ ಜಿಲ್ಲೆಯ 18 ಬಾಲಕಿಯರು, 1 ಬಾಲಕ ಸೇರಿದಂತೆ ಒಟ್ಟು 19 ವಲಸೆ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಜ.17ರ ಶುಕ್ರವಾರ ಬೆಳ್ಳಂಬೆಳಗ್ಗೆ ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳಾ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳಾ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ನಾಗರೀಕ ಸೇವಾ ಸಮಿತಿ, ಸ್ಪೂರ್ತಿ ವಿಶ್ವಾಸದ ಮನೆ ಶಂಕರಪುರ ಇದರ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಮಕ್ಕಳನ್ನು ರಕ್ಷಿಸಿ ಶಿಕ್ಷಣ ಮತ್ತು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳಾ ರಕ್ಷಣಾ ಘಟಕದ ಜಿಲ್ಲಾ ಮಕ್ಕಳಾ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ಕಾರ್ಮಿಕಾ ಅಧಿಕಾರಿ ಬಾಲಕೃಷ್ಣ, ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಪ್ರವೀಣ್ ಕುಮಾರ್, ಜಿಲ್ಲಾ ಮಕ್ಕಳಾ ರಕ್ಷಣಾ ಘಟಕ ಕಾರ್ಯಕರ್ತರು, ವಿವಿಧ ಇಲಾಖೆಯವರು ಉಪಸ್ಥಿತರಿದ್ದರು.