ಮಂಗಳೂರು, ಜ 30 : ವಿದ್ಯಾರ್ಥಿನಿ ಝೈಬುನ್ನಿಸಾ ಮತ್ತು ರಚನಾಳ ಅಸಹಜ ಸಾವಿನ ಕುರಿತು ಶೀಘ್ರ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಜ. 30 ರ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ನಡೆಸಿತು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಿದ್ದು, ಹಲವಾರು ಜೀವಗಳು ಬಲಿಯಾಗಿವೆ. ಮಂಡ್ಯ ಜಿಲ್ಲೆಯ, ಕೆ ಆರ್ ಪೇಟೆಯ ಅಲ್ಪಸಂಖ್ಯಾತ ಮಾದರಿ ಶಾಲೆಯ ವಿದ್ಯಾರ್ಥಿನಿ ಝೈಬುನ್ನಿಸಾ ಅಸಹಜ ಸಾವು, ಹಾಗೂ ಮೂಡುಬಿದಿರೆ ಖಾಸಗಿ ಶಾಲೆಯ ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ಸಾರ್ವಜನಿಕರಲ್ಲಿ, ಹಾಗೂ ವಿದ್ಯಾರ್ಥಿ ಪೋಷಕರಲ್ಲಿ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ, ಹೀಗಾಗಿ ತಕ್ಷಣ ಶಾಲಾ ಆಡಳಿತ ಮಂಡಳಿಯನ್ನು ಸಮಗ್ರ ತನಿಖೆಗೆ ಒಳಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಲ್ಲದೆ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ, ರೋಜರಿಯೋ, ಬದ್ರಿಯಾ ಕೊಲಾಸೋ ಕಾಲೇಜಿನ ವಿದ್ಯಾರ್ಥಿಗಳನ್ನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯದರ್ಶಿ, ಫರಾಝ್, ಜಿಲ್ಲಾಧ್ಯಕ್ಷ ಮೊಹಮ್ಮದ್ ತಪ್ಸರ್, ರೋಜರಿಯೋ, ಬದ್ರಿಯಾ ಕೊಲಸೋ ವಿದ್ಯಾರ್ಥಿಗಳು ಭಾಗವಹಿಸಿದ್ದರು.