ಕಾಸರಗೋಡು, ಜ 19(DaijiworldNews/SM): ಚಾಕ್ಲೆಟ್ ನೆಪದಲ್ಲಿ ಆಟೋ ರಿಕ್ಷಾಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹದಿನೈದು ಕಿಲೋ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತನನ್ನು ತಮಿಳುನಾಡು ಮೂಲದ ಮುಕುಂದ(33) ಎಂದು ಗುರುತಿಸಲಾಗಿದೆ. ಆಟೋವನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮಂಗಳೂರು ಕಡೆಯಿಂದ ತಂಬಾಕು ಉತ್ಪನ್ನಗಳನ್ನು ಉಪ್ಪಳ, ಕುಂಬಳೆ ಹಾಗೂ ಇತರ ಕಡೆಗಳಿಗೆ ಸರಬರಾಜು ಮಾಡುತ್ತಿದ್ದ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ವಾಹನ ತಪಾಸಣೆ ಸಂದರ್ಭದಲ್ಲಿ ಅಕ್ರಮ ಸಾಗಾಟ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದು, ತನಿಖೆ ಮುಂದುವರೆಸಿದ್ದಾರೆ.