ಮಂಗಳೂರು ಜ 30 : ಖಗ್ರಾಸ ಚಂದ್ರಗ್ರಹಣ ನಿಮಿತ್ತ ಜ 31 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಧ್ಯಾಹ್ನ 2.30 ರಿಂದ ರಾತ್ರಿ 9 ರವರೆಗೆ ಶ್ರೀ ಮಂಜುನಾಥ ದೇವರ ದರ್ಶನ ಹಾಗೂ ಪೂಜಾದಿ ಸೇವೆಗಳು ಇರುವುದಿಲ್ಲ. ರಾತ್ರಿ 9.30ರಿಂದ 10.30 ರವರೆಗೆ ಭಕ್ತರಿಗೆ ಹೊರಾಂಗಣದಿಂದ ದೇವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ಆದರೆ ರಾತ್ರಿ 9.30 ರಿಂದ 10.30 ರವರೆಗೆ ಭಕ್ತರಿಗೆ ಹೊರಾಂಗಣದಿಂದ ದೇವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಿದೆ. ಇನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿಯೂ ಗ್ರಹಣ ನಿಮಿತ್ತ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ. ಬೆಳಿಗ್ಗೆ 6.30ರಿಂದ 9ರ ತನಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಮಧ್ಯಾಹ್ನದ ಮಹಾಪೂಜೆ ಬೆಳಿಗ್ಗೆ ೮ಕ್ಕೆ ನೆರವೇರಲಿದ್ದು, ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯೂ ಇರುವುದಿಲ್ಲ. ಹಾಗೆಯೇ ರಾತ್ರಿ 8.30 ರಿಂದ ಮತ್ತೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ. ಇನ್ನು ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಅಭಾದಿತ ಎಂದು ತಿಳಿಸಿದ್ದಾರೆ.