ಬಂಟ್ವಾಳ, ಜ 20(DaijiworldNews/SM): ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿವೇಕ ಸಪ್ತಾಹದ ಸಮಾರೋಪ ಸಮಾರಂಭ ಇತ್ತೀಚೆಗೆ ಜರುಗಿತು.
ಮುಖ್ಯ ಅತಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಮಾತಾನಾಡಿ ರಾ.ಸೆ.ಯೋ. ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯ ಸದುದ್ದೇಶವನ್ನು ನಮ್ಮಲ್ಲಿ ಅಳವಡಿಸಿಕೊಂಡಾಗ ಯಾವುದೇ ಕಠಿಣ ಪರಿಸ್ಥಿತಿಯನ್ನು ಎದುರಿಸಬಹುದು. ಹಾಗೂ ಉತ್ತಮ ಜೀವನ್ನು ರೂಪಿಸಬಹುದು ಎಂದು ಅವರು ಹೇಳಿದರು.
ಇನ್ನೋರ್ವ ಅತಿಥಿ ನಿವೃತ್ತ ಸೈನ್ಯಾಧಿಕಾರಿ ಗೋಪಿನಾಥ್ ರಾವ್ ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸೌಮ್ಯ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದೇವಿ ಪ್ರಸಾದ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.