ಮಂಗಳೂರು, ಜ 21 (Daijiworld News/MSP): ಮಂಗಳೂರಿನಲ್ಲಿ ಜ. 27ರಂದು ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ನಗರದಲ್ಲಿ ನಡೆಯಲಿರುವ "ಬೃಹತ್ ಸಮರ್ಥನಾ ಸಮಾವೇಶ"ದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ.
ಜ.27ರ ಸೋಮವಾರ ಕೂಳೂರಿನ ಗೋಲ್ಡ್ಪಿಂಚ್ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ಆರಂಭಿಸಿದ್ದು ಈ ಬಗ್ಗೆ ತಯಾರಿ ನಡೆಸಲಾಗುತ್ತಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ,ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಿ ಸಮಾವೇಶ ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.