ಮಂಗಳೂರು, ಜ 23 (DaijiworldNews/SM): ಮಂಗಳೂರಿನಲ್ಲಿ ಬಾಂಬಿಟ್ಟ ಪ್ರಕರಣದ ಆರೋಪಿಯನ್ನು ಮಂಗಳೂರು ಪ್ರಥಮ ದರ್ಜೆ 6ನೇ ಜಿಲ್ಲಾ ಸತ್ರ ಮತ್ತು ಹೆಚ್ಚುವರಿ ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಆರೋಪಿಯನ್ನು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕೆನ್ನುವ ಪೊಲೀಸರ ಮನವಿಯನ್ನು ತಿರಸ್ಕರಿಸಿದೆ.
ಬದಲಿಗೆ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಯು ಬಾಂಬ್ ತಯಾರಿಸಲು ಬೇಕಾದ ರಾಸಾಯನಿಕಗಳನ್ನು ಚೆನ್ನೈನಿಂದ ತರಿಸಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಚೆನ್ನೈಗೆ ಕರೆದೊಯ್ದು ವಿಚಾರಣೆ ನಡೆಸಲು ಪೊಲೀಸರು ಅನುಮತಿ ಕೇಳಿದ್ದರು. ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು. ಆದರೆ ಪೊಲೀಸರ ಮನವಿಯನ್ನು ಕೋರ್ಟ್ ಪುರಸ್ಕರಿಸಿಲ್ಲ. ಹಾಗಾಗಿ ವಿಚಾರಣೆಗಾಗಿ ಪೊಲೀಸರು ಆರೋಪಿಯನ್ನು 10 ದಿನಗಳೊಳಗಾಗಿ ಚೆನ್ನೈಗೆ ಕರೆದುಕೊಂಡು ಹೋಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು 10 ದಿನಗಳೊಳಗೆ ಚೆನ್ನೈಗೆ ಕರೆದೊಯ್ದು ತನಿಖೆ ನಡೆಸಿ ಮಾಹಿತಿ ಸಂಗ್ರಹಿಸುವಂತೆ ಸೂಚನೆಯನ್ನು ನೀಡಲಾಗಿದೆ.