ಮಂಗಳೂರು, ಜ 25(Daijiworld News/MSP): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಜ.೨೭ ರಂದು ನಗರಕ್ಕೆ ಆಗಮಿಸಲಿದ್ದಾರೆ.ಅಂದು ಮಧ್ಯಾಹ್ನ 3.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಕೇಂದ್ರ ಸಚಿವರು ಸಾಯಂಕಾಲ 4ಕ್ಕೆ ಕೂಳೂರಿನಲ್ಲಿ ನಡೆಯಲಿರುವ ಜನಜಾಗೃತಿ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. 5 ಗಂಟೆಗೆ ಅಲ್ಲಿಂದ ನಿರ್ಗಮಿಸಿ ಅವರು 5.15 ಗಂಟೆಗೆ ವಿಮಾನದ ಮೂಲಕ ನವದೆಹಲಿಗೆ ತೆರಳುವರು.
ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಬಾಗವಹಿಸುವ ನಿರೀಕ್ಷೆ ಇದೆ. ಇದೆ ಸಂದರ್ಭದಲ್ಲಿ ನಗರದ ಬಸ್ ,ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಬೆಂಬಲ ನೀಡಲಿದ್ದು , ವ್ಯಾಪಾರಸ್ತರು ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಅಂಗಡಿ ಮುಂಗಟ್ಟುಗ ಳನ್ನು ಮುಚ್ಚಿ ಬೆಂಬಲ ನೀಡಲಿದ್ದಾರೆ ಎಂದು ತಿಳಿದು ಬಂದಿದೆ
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ದಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹಾಲದ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಬಾಗವಹಿಸಿಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಸಾರ್ವಜನಿಕರಿಗೆ ವಾಹನದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪೊಲೀಸ್ ಇಲಾಖೆಯು ಮಾರ್ಗಸೂಚಿಯನ್ನು ರಚಿಸಿದ್ದು ಈ ನಿಟ್ಟಿ ನಲ್ಲಿ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.