ಮಂಗಳೂರು, ಜ 26 (Dajiworld News/MB) : 71 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಪಥಸಂಚಲನ ನೆರೆದವರ ಕಣ್ಮನ ಸೆಳೆಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಐಜಿಪಿ ಜೆ ಅರುಣ್ ಚಕ್ರವರ್ತಿ, ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಎಂಎಲ್ಸಿಗಳಾದ ಭೋಜೆಗೌಡ, ಐವನ್ ಡಿಸೋಜಾ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯನಾಂದ ಕತ್ತಲ್ಸಾರ್ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾದ ಹರೇಕಳ ಹಾಜಬ್ಬ ಸೇರಿ ಇತರ ಸಾಧಕರನ್ನು ಸನ್ಮಾನಿಸಲಾಯಿತು.
ಪಥಸಂಚಲನದಲ್ಲಿ ವಿದ್ಯಾರ್ಥಿಗಳು, ಎನ್ಸಿಸಿ ತಂಡ, ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಭಾರತದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.