ಮಂಗಳೂರು, ಜ 27 (Daijiworld News/MB) : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಇಂದು ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಕೇಂದ್ರ ಸಚಿವರು ಕೂಳೂರಿನಲ್ಲಿ ನಡೆಯಲಿರುವ ಜನಜಾಗೃತಿ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅವರು ವಿಮಾನದ ಮೂಲಕ ನವದೆಹಲಿಗೆ ತೆರಳಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ದಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಬಾಗವಹಿಸಿಲಿದ್ದಾರೆ.