ಮಂಗಳೂರು, ಜ 30(Daijiworld News/MSP): ಸ್ಕೂಟರ್ ಗೆ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು , ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ನಡೆದಿದೆ.
ಮೃತಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸವಾರನ ಗುರುತು ಪತ್ತೆಯಾಗಿಲ್ಲ.
ಎಜೆ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೆ ಡಿಕ್ಕಿಯ ರಭಸಕ್ಕೆ ಸ್ಕೂಟರ್ ನ್ನು 50 ಮೀಟರ್ ನಷ್ಟು ಎಳೆದೊಯ್ಯಿದಿದೆ.
ಅಪಘಾತದ ಪರಿಣಾಮ ಸ್ಕೂಟರ್ ಸವಾರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿದ್ದು, ಸಹಸವಾರೆ ಸುಜಾತ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ