ಪುತ್ತೂರು, ಸೆ17: ದೇಯಿಬೈದೈತಿ ಪ್ರತಿಮೆಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬ್ದುಲ್ ಹನೀಫ್ ಗೆ ಪುತ್ತೂರು ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಪಿಪಿ ಪ್ರತಾಪ್ ಅವರ ವಾದವನ್ನು ಪುರಸ್ಕರಿಸಿ ಜಾಮೀನು ಅರ್ಜಿ ತಿರಸ್ಕರಿಸಿದೆ.
ಪುತ್ತೂರಿನ ಮುಡಿಪಿನಡ್ಕದ ಔಷಧ ವನದಲ್ಲಿರುವ ದೇಯಿ ಬೈದೆತಿ ಪ್ರತಿಮೆಯ ಜೊತೆಗೆ ಹನೀಫ್ ಅಸಭ್ಯ ರೀತಿಯಲ್ಲಿ ಫೋಟೋ ತೆಗೆಸಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ಸೆಪ್ಟೆಂಬರ್ ೧೦ ರಂದು ಆರೋಪಿ ಹನಿಫ್ ನನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಹನೀಫ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಇದೀಗ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನು ಅರ್ಜಿ ತಿರಸ್ಕರಿಸಿದೆ.