ಮಂಗಳೂರು, ಫೆ. 01 (Daijiworld News/MB) : ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯ ರಾವ್ನ ಪೊಲೀಸ್ ಕಸ್ಟಡಿ ಫೆ.1 ರಂದು ಮುಕ್ತಾಯವಾಗಲಿದ್ದು ಶನಿವಾರ ಬೆಳಗ್ಗೆ ಪೊಲೀಸರು ನ್ಯಾಯಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಆರೋಪಿ ಜ.20 ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಇರಿಸಿದ್ದು ಜ.22ರಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ.
ಮಂಗಳೂರು ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಮಾಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕಿಶೋರ್ ಕುಮಾರ್ ಕೆ.ಎನ್. ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದರು.
ಪೊಲೀಸರು ಆತನನ್ನು ಘಟನೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದರು. ಹಾಗೆಯೇ ಆತನ ಬ್ಯಾಂಕ್ ಲಾಕರ್ಗಳ ಪರಿಶೀಲನೆ ಕೂಡಾ ನಡೆಸಿದ್ದಾರೆ.