ಮಂಗಳೂರು, ಫೆ.01 (Daijiworld News/PY) : ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯ ರಾವ್ಗೆ 6ನೇ ಜೆಎಂಎಫ್ಸಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆದಿತ್ಯ ರಾವ್ನ 10 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಶನಿವಾರ ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಜ.20ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ಜ.22ರಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ. ಮಂಗಳೂರು ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕಿಶೋರ್ ಕುಮಾರ್ ಕೆ.ಎನ್. ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದರು.
ಪೊಲೀಸರು ಆತನನ್ನು ಘಟನೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದರು. ಹಾಗೆಯೇ ಆತನ ಬ್ಯಾಂಕ್ ಲಾಕರ್ಗಳ ಪರಿಶೀಲನೆ ಕೂಡಾ ನಡೆಸಿದ್ದಾರೆ.