ಮಂಗಳೂರು, ಫೆ 04 (Daijiworld News/MB) : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ 2019 ರ ಡಿಸೆಂಬರ್ 19 ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗುಂಡೇಟಿಗೆ ಇಬ್ಬರು ಬಲಿಯಾಗಿರುವ ಬಗ್ಗೆ ನಡೆಯುತ್ತಿರುವ ಮ್ಯಾಜಿಸ್ಟ್ರೀರಿಯಲ್ ವಿಚಾರಣೆಗೆ ಸಾಕ್ಷ್ಯ ಹಾಗೂ ಹೇಳಿಕೆಗೆ ಫೆ.6 ರಂದು ಕೊನೆಯ ಅವಕಾಶವಾಗಿದೆ.
ಈ ಘಟನೆಗೆ ಸಂಬಂಧಿಸಿ ಮಾಹಿತಿ ಉಳ್ಳವರು ಅಥವಾ ಈ ಘಟನೆಯನ್ನು ಪ್ರತ್ಯಕಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಫೆ.6 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ ಮಿನಿ ವಿಧಾನಸೌಧದ ಆಯುಕ್ತರ ಕೋರ್ಟ್ ಹಾಲ್ಗೆ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶ ನೀಡಲಾಗಿದೆ.
ಆ ಬಳಿಕ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಗೋಲಿಬಾರ್ನಿಂದಾಗಿ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಸಾವನ್ನಪ್ಪಿದ್ದರು.