ಕಾಸರಗೋಡು, ಫೆ 04 (Daijiworld News/MB) : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಉದುಮ ಆರಾಮಂಗಾನ ನಿವಾಸಿ ಇ. ಅಶ್ವಥಿ (18) ಮೃತ ವಿದ್ಯಾರ್ಥಿನಿ.
ವಿದ್ಯಾರ್ಥಿನಿಯು ಮುನ್ನಾಡ್ನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿನಿಯಾಗಿದ್ದು ಎರಡು ದಿನಗಳ ಹಿಂದೆ ಮಂಜೇಶ್ವರ ಬಳಿಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು.
ವಿದ್ಯಾರ್ಥಿನಿಯನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.