ಮಂಗಳೂರು, ಫೆ.08 (Daijiworld News/PY) : ಪಂಪ್ವೆಲ್ ಮೇಲ್ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಡಸ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ನಂತೂರಿನ ಸ್ವಾಗತ್ ಗ್ಯಾರೇಜ್ ಮಾಲೀಕ ಪ್ರವೀಣ್ ಫರ್ನಾಂಡಿಸ್ (45) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಆಲ್ಟೋ 800 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಪ್ರವೀಣ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಡಸ್ಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ರೌಂಡ್ ಪಲ್ಟಿಯಾಗಿದ್ದು ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದಿತ್ತು. ಎರಡು ಕಾರಿನಲ್ಲಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದ್ದು, ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.