ಉಪ್ಪಿನಂಗಡಿ, ಫೆ 09 (Daijiworld News/MB) : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ನೆಲ್ಯಾಡಿಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಒಂದೇ ಕುಟುಂಬಕ್ಕೆ ಸೇರಿದ ನೆಲ್ಯಾಡಿ ನಿವಾಸಿಗಳಾದ ಡಾ. ಜೈನಿ ಶಾಜಿ (30), ಹಾಗೂ ಜಿಸನ್ (40) ಎಂದು ಗುರುತಿಸಲಾಗಿದೆ.ಇವರಿಬ್ಬರು ಖಾಸಗೀ ಕಾಲೇಜಿನಲ್ಲಿ ಸಹ ಪ್ರಾಧ್ಯಪರಾಗಿದ್ದರು. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಶರ್ವಿನ್ ಶಾಜಿ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಬಂದಿದ್ದು ಪ್ರಕರಣ ದಾಖಲು ಮಾಡಲಾಗಿದೆ.