ಮಂಗಳೂರು, ಫೆ 11 (DaijiworldNews/SM): ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಸರಗೋಡು ಮೂಲದ ಸೈಪುದ್ದೀನ್ ತೆಕ್ಕೀಲ್ ಫಝೇವಾ ಲಾಫಿಲ್ ಎಂಬ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈತ ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ. ತನ್ನ ದೇಹದೊಳಗೆ ಇರಿಸಿಕೊಂಡು ಚಿನ್ನ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸುಮಾರು ೨೫ ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಆರೋಪಿಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ಕಸ್ಟಮ್ಸ್ ಜಂಟಿ ಆಯುಕ್ತ ಜಾನಸ್ ಜಾರ್ಜ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಮಾಹಿತಿಯನ್ನು ನೀಡಿದ್ದಾರೆ.
ರೈಲ್ವೇ ನಿಲ್ದಾಣದಲ್ಲಿ ನಿಷೇಧಿತ ಸಿಗರೇಟುಗಳು ವಶಕ್ಕೆ
ಇನ್ನು ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ನಿಷೇಧಿತ ಸಿಗರೆಟ್ ಪತ್ತೆಯಾಗಿದ್ದು ಅವುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ಕಸ್ಟಮ್ಸ್ ಜಂಟಿ ಆಯುಕ್ತ ಜಾನಸ್ ಜಾರ್ಜ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯಿಂದ 120 ಕರ್ಟಲ್ಸ್ ನಿಷೇದಿತ ಸಿಗರೆಟ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದು, ಆತನಿಂದ ಸಿಗರೇಟ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಕ್ಯಾಲಿಕಟ್ ನಿಂದ ನಿಷೇದಿತ ಸಿಗರೇಟ್ ತರಿಸಿರುವ ಶಂಕೆ ವ್ಯಕ್ತಪಡಿಸಲಾಗಿದೆ ಎಂದರು.