ಮೂಡುಬಿದಿರೆ, ಫೆ.13 (DaijiworldNews/PY): ಇಲ್ಲಿನ ಸ್ವರಾಜ್ಯ ಮೈದಾನದ ಫಾಸ್ಟ್ಫುಡ್ ತಳ್ಳುಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಲದಿನಗಳಿಂದ ಹರಿದಾಡುತ್ತಿದ್ದು, ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ತಳ್ಳುಗಾಡಿಯಲ್ಲಿ ಕೆಲಸ ಮಾಡುವ ಯುವಕ ಮೂಡಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.
ಬುದ್ದಿಮಾನ್ ದೂರು ನೀಡಿದ ಯುವಕ. ಇವರು ಮೂಡಬಿದಿರೆ ಸ್ವರಾಜ್ಯ ಮೈದಾನದ ಚೈನೀಸ್ ಫಾಸ್ಟ್ಫುಡ್ನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಕಳೆದ 3-4 ದಿನಗಳಿಂದ ಯುವಕನಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಜನರಲ್ಲಿ ಆತಂಕ ಸೃಷ್ಠಿ ಮಾಡಿದ ದುಷ್ಕರ್ಮಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ಧಾರೆ.