ಮಂಗಳೂರು, ಫೆ 14 (Daijiworld News/MB) : ನಗರದ ಹೊರ ವಲಯದಲ್ಲಿರುವ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ತಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿದ ವಿರುದ್ಧವಾಗಿ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೀನಾದಲ್ಲಿ ಜನರ ಸಾವಿಗೆ ಕಾರಣವಾಗುತ್ತಿರುವ ಕೊರೋನಾ ವೈರಸ್ ವಿಶ್ವದಾದ್ಯಂತ ಹಬ್ಬಿದ್ದು ಭಾರತದ ಕೇರಳದಲ್ಲೂ ಕೊರೋನಾ ವೈರಸ್ ಪತ್ತೆಯಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ವೈರಸ್ ಸಂಬಂಧ ವದಂತಿಗಳು ಹರಡುತ್ತಿದೆ.
ಹಾಗೆಯೇ ಸಹ್ಯಾದ್ರಿ ಕಾಳೇಜಿನ ವಿದ್ಯಾರ್ಥಿಗಳಲ್ಲಿಯೂ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಯಾರೋ ಸುಳ್ಳು ಸಂದೇಶವನ್ನು ಹರಿಯಬಿಟ್ಟಿದ್ದಾರೆ. ಈ ವಿಚಾರವಾಗಿ ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದು ಕಾಲೇಜು ಪ್ರಾಂಶುಪಾಲರಾದ ಡಾ. ಶ್ರೀನಿವಾಸ ರಾವ್ ಮಂಗಳೂರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.