ಬೆಳ್ಳಾರೆ, ಜ 15 (DaijiworldNews/SM): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅಬ್ದುಲ್ಲಾ ಎಂಬ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಶುಕ್ರವಾರದಂದು ಬಂಧಿಸಿದ ಪ್ರಕರಣ ಸಂಬಂಧಿಸಿದಂತೆ, ಇದೀಗ ಆರೋಪಿಯ ಗೂಡಂಗಡಿ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಘಟನೆ ಶನಿವಾರದಂದು ಬೆಳಕಿಗೆ ಬಂದಿದೆ. ಅಂಗಡಿಯ ಸಾಮಾಗ್ರಿಗಳು ಸುಟ್ಟು ಕರಕಲಾಗಿದ್ದು. ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.
೫ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಹಿನ್ನಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು, ಈ ಸಂಬಂಧವಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಇದಾದ ಬಳಿಕ, ಆರೋಪಿಯು ನಡೆಸುತ್ತಿದ್ದ ಗೂಡಂಗಡಿಗೆ ಬೆಂಕಿ ತಗುಲಿ ಸುಟ್ಟು ಹೋಗಿದೆ, ಅಂಗಡಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಕೊಟ್ಟಿರಬಹುದೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿರಬಹುದೇ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.