ಮಂಗಳೂರು, ಫೆ 17 (DaijiworldNews/SM) : ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಒಟ್ಟು 58.95 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಮೊದಲ ಪ್ರಕರಣದಲ್ಲಿ ಕೇರಳದ ಮಲಪುರಂ ನಿವಾಸಿ ಮಹಮ್ಮದ್ ಸ್ವಲೀ(22) ಎಂಬಾತನನ್ನು ಬಂಧಿಸಲಾಗಿದೆ. ಈತ ದುಬೈಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ಈತ ಸುಮಾರು 32,35,820/- ಮೌಲ್ಯದ 797 ಗ್ರಾಂ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಇನ್ನು ಮತ್ತೊಂದು ಪ್ರಕರಣದಲ್ಲಿ 26.59 ರೂಪಾಯಿ ಮೌಲ್ಯದ 655 ಗ್ರಾಂ ಚಿನ್ನವನ್ನು ಆರೋಪಿ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮಹಮ್ಮದ್ ನಿಶಾದ್(25) ಪ್ರಕರಣದ ಆರೋಪಿಯಾಗಿದ್ದಾನೆ. ಈತ ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಎಂದು ತಿಳಿದುಬಂದಿದೆ.
ಇನ್ನು ಇಬ್ಬರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.