ಕಾರ್ಕಳ: ಫೆ 18 (DaijiworldNews/SM): ಇಲ್ಲಿನ ಮುಡಾರು ಗ್ರಾಮ ಪಾಜಿನಡ್ಕದ ಹಾಡಿಯಲ್ಲಿ ಅಕ್ರಮ ಕಸಾಯಿಖಾನೆಯೊಂದನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಮಾಡಿದ್ದಾರೆ.
ಜೈಲೋ ಕಾರಿನ ಚಾಲಕ ಹಾಗೂ ಇನ್ನೋರ್ವ ತಮ್ಮ ಸ್ವಂತ ಲಾಭಕ್ಕಾಗಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶಹೊಂದಿದ್ದರು. ಮೂರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಲಾಗಿತ್ತು.
ಈ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಗ್ರಾಮಾಂತರ ಠಾಣಾಧಿಕಾರಿ ನಜೀರ್ ಹುಸೈನ್ ನೇತೃತ್ವದಲ್ಲಿ ಪೊಲೀಸರ ತಂಡವು ಮಂಗಳವಾರ ನಸುಕಿನ ಜಾವದಲ್ಲಿ ಕಾರ್ಯಚರಣೆ ನಡೆಸಿದಾಗ ಆರೋಪಿತರು ಹಾಡಿಯೊಳಗಿನಿಂದ ಓಡಿ ಪರಾರಿಯಾಗಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ
ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋವು ಹಾಗೂ ಕರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ಪೊಲೀಸರು ಆರೋಪಿಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಆರೋಪಿಗಳು ಮೂಡಬಿದಿರೆ ತೋಡಾರು ಹಾಗೂ ಬಜಪೆ ಠಾಣಾ ವ್ಯಾಪ್ತಿಯವರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.