ಮಂಗಳೂರು,ಸೆ17: ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಇನ್ನು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಡಾ.ಜಗದೀಶ್ ಹೈ ಅಲರ್ಟ್ ಘೋಷಿಸಿದ್ದಾರೆ.
ಹೀಗಾಗಿ ಜಿಲ್ಲೆಯ ಎಲ್ಲಾ ತಹಶೀಲ್ದಾರ್, ಸರ್ಕಾರಿ ಅಧಿಕಾರಿಗಳು ತಾಲೂಕು ಪಂಚಾಯತ್ ಇಒಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಇರುವಂತೆ ಡಿಸಿ ಆದೇಶ ನೀಡಿದ್ದಾರೆ. ಇನ್ನು ತಗ್ಗು ಪ್ರದೇಶವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೂಡಾ ಸೂಚನೆ ನೀಡಲಾಗಿದೆ. ಭಾರೀ ಮಳೆಯಾದರೆ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ಕೂಡಾ ನೀಡಲಾಗಿದೆ. ಇನ್ನು ಪ್ರಮುಖವಾಗಿ ಮಳೆ ಅವಾಂತರದಿಂದ ಸೇತುವೆ ರಸ್ತೆ ಹಾನಿಯಾದರೆ ಆ ಪ್ರದೇಶಕ್ಕೆ ತುರ್ತು ಭೇಟಿ ನೀಡಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದ್ದಾರೆ.