ವಿಟ್ಲ, ಫೆ 21 (DaijiworldNews/SM): ಕಂಟೈನರ್ ಲಾರಿಯೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಸಹಿತ ಇಬ್ಬರು ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಸಂಭವಿಸಿದೆ.
ಆಟೋ ರಿಕ್ಷಾ ಗಡಿಯಾರದಿಂದ ಪೇರಮೊಗೇರು ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಚಾಲಕ ಕಂಟೈನರ್ ಸಹಿತವಾಗಿ ಪರಾರಿಯಾಗಲು ಯತ್ನಿಸಿದ್ದಾನೆ.
ಆದರೆ ಸಾರ್ವಜನಿಕರು ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಇಬ್ಬರು ಆಟೋದೊಳಗಡೆ ಇದ್ದರು. ಅವರು ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಘಟನೆಯಲ್ಲಿ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.