ಜಮ್ಮು ಕಾಶ್ಮೀರ, ಫೆ 11 : ಜಮ್ಮು ಕಾಶ್ಮೀರದ ಹೊರವಲಯದ ಸಂಜ್ವಾನ್ನಲ್ಲಿ ಉಗ್ರರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ತುಂಬು ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಫೆ.10 ರ ಶನಿವಾರ ಸೇನಾ ಸಿಬ್ಬಂದಿ ವಸತಿ ನಿಲಯದ ಮೇಲೆ ಶನಿವಾರ ಜೈಶ್ ಎ ಮೊಹಮ್ಮದ್ ಉಗ್ರರು ನಡೆಸಿದ ದಾಳಿಯಲ್ಲಿ ಗರ್ಭಿಣಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಬೆನ್ನಿನ ಕೆಳ ಭಾಗಕ್ಕೆ ಗುಂಡು ಹೊಕ್ಕಿ ಪವಾಡ ಸದೃಶವಾಗಿ ಪಾರಾಗಿದ್ದ 35 ತಿಂಗಳ ತುಂಬು ಗರ್ಭಿಣಿಯನ್ನು ದಾಳಿ ನಡೆದ ಕೂಡಲೆ ಸೇನಾ ಪಡೆಗಳು ಹೆಲಿಕ್ಯಾಪ್ಟರ್ ಬಳಸಿ ಸೇನಾ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರ ಚಿಕಿತ್ಸೆ ನಡೆಸಿ ಮಗುವನ್ನು ಹೊರತೆಗೆಯಲಾಗಿದ್ದು, ಹೆಣ್ಣು ಮಗು 2.5 ಕೆ.ಜಿ ತೂಕವಿದ್ದು ಆರೋಗ್ಯವಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಇನ್ನು ಘಟನೆಯಿಂದ ತಾಯಿಯೂ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಅಲ್ಲದೆ ಕ್ಯಾಂಪ್ನಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಸಾಧ್ಯತೆ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ.