ಕಾಸರಗೋಡು, ಫೆ 25 (DaijiworldNews/SM): ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಮಂಜೇಶ್ವರದ ಮೊರತ್ತನೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ.
ಅಬೂಸಾಲಿ ಎಂಬವರ ಮನೆಯ ಅಂಗಳದಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಅಬೂಸಾಲಿ ತಮ್ಮ ದ್ವಿಚಕ್ರ ವಾಹನಗಳಾದ ಬೈಕ್ ಹಾಗೂ ಸ್ಕೂಟಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದರು. ಆದರೆ, ರಾತ್ರಿ ಯಾರೋ ಕಿಡಿಗೇಡಿಗಳು ಇವುಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟಿ ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಬೈಕ್ ಭಾಗಶಃ ಬೆಂಕಿಗಾಹುತಿಯಾಗಿದೆ. ಯಾರು ಹಾಗೂ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂಬುವುದು ತಿಳಿದುಬಂದಿಲ್ಲ.
ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.