ಉಡುಪಿ, ಫೆ 26 (DaijiworldNews/SM): ಶಿರ್ವಾ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ನಾಲ್ಕು ತಿಂಗಳ ಬಳಿಕ ಇದೀಗ ಓರ್ವನನ್ನು ಬಂಧಿಸಲಾಗಿದೆ.
ಫಾ. ಮಹೇಶ್ ನಡುವಿನ ಕೊನೆಯ ಫೋನ್ ಕರೆಗಳ ವಿವರಗಳ ಆಧಾರದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಸು-ಮೋಟೋ ಪ್ರಕರಣ ದಾಖಲಿಸಿದ್ದಾರೆ ಎಂದು ದಾಯ್ಜಿವರ್ಲ್ಡ್ ಗೆ ಮಾಹಿತಿ ಲಭಿಸಿದೆ. ಬಂಧಿತನನ್ನು ಸ್ಥಳೀಯವಾದ ರಾಜಕೀಯ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜಾ ಗುರುತಿಸಲಾಗಿದೆ.
ತನಿಖಾ ಅಧಿಕಾರಿ ಮಹೇಶ್ ಪ್ರಸಾದ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ತನಿಖೆಯನ್ನು ನಡೆಸಿದ್ದಾರೆ. ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ. ಹಲವು ಸಾಕ್ಷ್ಯಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅದರ ಬಳಿಕ ಮಹತ್ವದ ಸುಳಿವಿನ ಆಧಾರದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ತಿಳಿದು ಬಂದಿದ್ದು, ಈ ಹಿನ್ನೆಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದಾಯ್ಜಿವರ್ಲ್ಡ್ ಗೆ ಮಾಹಿತಿ ಲಭಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.