ಮಂಗಳೂರು, ಫೆ 28 (Daijiworld News/MB) : ಕಂಪೌಂಡ್ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದು ನೆಲದಡಿ ಸಿಲುಕಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತ ಕಾರ್ಮಿಕರನ್ನು ಬಾಗಲ್ಕೋಟೆಯ ಬಿಮೇಶ್ ಹಾಗೂ ಬೆಂಗಾಲ ಮೂಲದ ಮುಝ್ರಿಕುಲ್ ಎಂದು ಗುರುತಿಸಲಾಗಿದೆ. ಹಾಗೆಯೇ ಹನಿಕುಲ್ ಎಂಬ ಓರ್ವ ಕಾರ್ಮಿಕ ಗಾಯಗೊಂಡಿದ್ದು ಆತನನ್ನು ಯೆನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ಮಿಕರು ಕಂಪೌಂಡ್ ಗೋಡೆ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚಾರಣೆ ಮಾಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್ ಅವರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದು, "ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಓರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕುಸಿತಗೊಂಡ ಮಣ್ಣು ಹಾಗೂ ಕಲ್ಲುಗಳನ್ನು ತೆಗೆಯುವುದರ ಮೂಲಕ ರಕ್ಷಣಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಘಟನೆಯಿಂದಾಗಿ ನನಗೆ ದುಖಃವಾಗಿದೆ. ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ತಿಳಿಸಿದ್ದಾರೆ.