ಮಂಗಳೂರು, ಫೆ 13: ಕರಾವಳಿಯಲ್ಲಿ ಈಗಾಗಲೇ ಒಂದು ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿರುವ ಬಿಜೆಪಿ ಪಕ್ಷವು ಮತ್ತೊಂದು ಯಾತ್ರೆಗೆ ಭರ್ಜರಿ ತಯಾರಿ ನಡೆಸಿದೆ.
ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಕೊಡಗು ಮತ್ತು ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಬಿಜೆಪಿ ಪಕ್ಷವು ಮಾ. 3 ರಿಂದ 6 ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಕೊಡಗು ಜಿಲ್ಲೆಯ ಕುಶಾಲ ನಗರ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮಟಾದಿಂದ ಪಾದಯಾತ್ರೆ ಹೊರಡಲಿದ್ದು, ಕೊನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ತಲುಪಲಿದೆ.
ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾದಯಾತ್ರೆಗೆ ದಿನಾಂಕ ನಿಗದಿ ಪಡಿಸಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿದೆ.