ಮಂಗಳೂರು, ಫೆ 14 : ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ, ನಿಯಮಗಳಂತೆ ಮರಳು ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಸಾಧನ ಅಳವಡಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಗಳು ಫೆಬ್ರವರಿ 08 ರಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಮರಳು ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಸಾಧನ ಅಳವಡಿಸಲು ಮತ್ತೊಮ್ಮೆ ಕಾಲಾವಕಾಶ ನೀಡಲಾಗಿದೆ. ಒಂದುವೇಳೆ ಜಿ.ಪಿ.ಎಸ್. ಸಾಧನ ಅಳವಡಿಸದೆ ಮರಳು ಸಾಗಾಟ ಮಾಡುವ ವಾಹನಗಳು ಕಂಡುಬಂದಲ್ಲಿ ಅಂತಹ ವಾಹನಗಳನ್ನು ನಿಯಮಾವಳಿಯಂತೆ ಮುಟ್ಟುಗೋಲು ಹಾಕಿಕೊಂಡು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.