ಧರ್ಮಸ್ಥಳ, ಮಾ 05(DaijiworldNews/SM): ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಹಾಸ್ ಎಂಬಾತ ಮೃತ ಯುವಕನಾಗಿದ್ದಾನೆ.
ಧರ್ಮಸ್ಥಳದ ಶಿಶಿಲ ಸಮೀಪ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ತೆರಳಿದ್ದ ಸಂದರ್ಭ ಆಯತಪ್ಪಿ ಬಿದ್ದು ಘಟನೆ ಸಂಭವಿಸಿದೆ. ಸಂದೀಪ್ ಗೌಡ ಎಂಬವರಿಗೆ ಸೇರಿದ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಟಿಪ್ಪರ್ ನಲ್ಲಿ ತುಂಬಿಸಲೆಂದು ನದಿಯಿಂದ ಮರಳು ತೆಗೆಯುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.