ಕಾರ್ಕಳ, ಮಾ. 06 (Daijiworld News/MB): ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಶ್ಯಾಮಲಾ (37) ಅವರು ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವದಿಂದಾಗಿ ಗುರುವಾರ ಮೃತಪಟ್ಟಿದ್ದಾರೆ.
ಮಾ.3 ರಂದು ಕಾರ್ಕಳದ ಆಸ್ಪತ್ರೆಗೆ ದಾಖಲಾಗಿದ್ದ ಶ್ಯಾಮಲಾ ಅವರಿಗೆ ಗುರುವಾರ ಮಧ್ಯಾಹ್ನದ ವೇಳೆಗೆ ಹೆರಿಗೆಯಾಗಿತ್ತು.
ಆನಂತರ ಅಧಿಕ ರಕ್ತಸ್ರಾವವಾಗುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ.
ಮೃತ ಶ್ಯಾಮಲಾ ಅವರ ಪತಿ ಗಿರಿಧರ್ ಪೈ ಕೂಡಾ ಕಾರ್ಕಳ ನಗರ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.