ಮಂಗಳೂರು, ಮಾ 9 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ, ಸಾರ್ವಜನಿಕರು ಗಾಬರಿಯಾಗಬೇಕಾದ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ.
ದುಬೈನಿಂದ ಬಂದಿಳಿದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಭಾನುವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನ ದೇಹದ ಉಷ್ಣಾಂಶ ಹೆಚ್ಚಾಗಿತ್ತು. ಹೀಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರಿಸಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು , ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.
ಈಗಾಗಲೇ ಚಿಕಿತ್ಸೆಗೆ ಸಹಕರಿಸದ ಅವರನ್ನು ಪರೀಕ್ಷೆಗೆ ಒಳಪಡುವಂತೆ ಮನವೊಲಿಕೆ ಮಾಡಲಾಗುತ್ತಿದೆ. ಆದರೆ ಆತನಿಂದ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.