ಮಂಗಳೂರು, ಫೆ 15: ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಹಾಗೂ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶ್ರಫ್ ಜೆಡಿಎಸ್ ಸೇರುತ್ತಿರುವುದು ಖಚಿತವಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಅಶ್ರಫ್ ಜೆಡಿಎಸ್ ಪಕ್ಷ ಸೇರಲಿದ್ದು, ಈ ನಿಟ್ಟಿನಲ್ಲಿ ಆಶ್ರಫ್ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಮಾತ್ರವಲ್ಲದೇ, ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿಯುವ ಮಾಹಿತಿ ಲಭ್ಯವಾಗಿದೆ.
ಒಂದು ವೇಳೆ ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಅಶ್ರಫ್ ಕಣಕ್ಕಿಳಿದರೆ. ಪಿಎಫ್ಐ ಹಾಗೂ ಅದರ ರಾಜಕೀಯ ಸಂಘಟನೆ ಎಸ್.ಡಿ.ಪಿ.ಐ ಅಶ್ರಫ್ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮತಗಳು ವಿಭಜನೆಗೊಳ್ಳುವ ಆತಂಕ ಕಾಂಗ್ರೆಸಿಗರನ್ನು ಕಾಡುತ್ತಿದೆ.
ಸಾಕಷ್ಟು ಜನ ಬೆಂಬಲವನ್ನು ಗಳಿಸಿರುವ ಆಶ್ರಫ್ ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ಪಕ್ಷದಲ್ಲಿ ಇರುವಾಗ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದರು. ಇದೀಗ ಅಶ್ರಫ್ ಅವರನ್ನು ಪಕ್ಷಕ್ಕೆ ಕರೆತಂದರೆ ಅಲ್ಪಸಂಖ್ಯಾತರ ಮತ ಪಡೆಯಬಹುದೆನ್ನುವ ಯೋಚನೆ ಜೆಡಿಎಸ್ ಪಕ್ಷದ್ದು.