ವಿಟ್ಲ, ಮಾ. 11 (Daijiworld News/MB) : ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಮಾರ್ಗದರ್ಶನದಲ್ಲಿ ನಡೆದ 53 ನೇ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಮಂಗಳವಾರ ನಾನಾ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮಾ. 9 ರಂದು ಶ್ರೀಗಣಪತಿ ಹೋಮದ ಬಳಿಕ ಶ್ರೀದೇವಿಯ ಕಲಶ ಪ್ರತಿಷ್ಠೆ, ಬಳಿಕ ನಾನಾ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಿತು.
ಮಂಗಳವಾರ ಮುಂಜಾನೆ ಶ್ರೀ ಗಣಪತಿ ಹೋಮ, ಶ್ರೀ ನರಸಿಂಹ ಮಂಡಲ ಪೂಜೆ, ತುಲಾಭಾರ ಸೇವೆ, ಮಹಾಪೂಜೆ ನಡೆಯಿತು.
ಆ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯ ಬಲಿ ಉತ್ಸವ, ಪಲ್ಲಕಿ ಉತ್ಸವ ನಡೆಯಿತು. ಶ್ರೀ ದೇವಿಗೆ ಅಲಂಕಾರ ಪೂಜೆ, ಹೂವಿನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಊರಪರವೂರಿನ ಅಪಾರ ಸಂಖ್ಯೆಯ ಭಕ್ತರು ನೆರೆದಿದ್ದರು.
ಸಂಜೆ ದೀಪಾರಾಧನೆ, ಆಂಜನೇಯ ಸ್ವಾಮಿಯ ಮಹಾಪೂಜೆ ನೆರೆವೇರಿಸಲಾಯಿತು. ಬುಧವಾರ ಬೆಳಿಗ್ಗೆ ರಕ್ತೇಶ್ವರಿ ದೈವದ ತೊಡಂಗಲ್, ರಕ್ತೇಶ್ವರಿ ದೈವದ ನೇಮೋತ್ಸವ ಜರುಗಿತು.
ಶ್ರೀ ಕ್ಷೇತ್ರ ಕುಕ್ಕಾಜೆಯ ಮೊಕ್ತೇಸರರು ಎಂ.ಕೆ. ಕುಕ್ಕಾಜೆ, ಧರ್ಮದರ್ಶಿ ಶ್ರೀ ಶ್ರೀ ಕೃಷ್ಣ ಗುರೂಜಿ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಕ್ತಾಧಿಗಳು ಭಾಗವಹಿಸಿದ್ದರು