ಮಣಿಪಾಲ, ಮಾ13 ( Daijiworld News/MSP): ಕೊರೊನಾಘಾತಕ್ಕೆ ದೇಶವೇ ತತ್ತರಿಸಿದ್ದು ಈ ನಡುವೆ ಮಣಿಪಾಲ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ ಹರಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಇವರನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ
ಈ ವಿದ್ಯಾರ್ಥಿಗಳು ಇತ್ತೀಚೆಗೆ ಅಮೆರಿಕಾ ಮಲೇಷ್ಯಾ ಮತ್ತು ಕುವೈಟ್ ನಿಂದ ಹಿಂದಿರುಗಿದ್ದರು ಎಂದು ತಿಳಿದುಬಂದಿದೆ. ಮೂವರಿಗೂ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರಿಬ್ಬರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರು ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು. ಶೀಘ್ರದಲ್ಲೇ ಇವರ ವರದಿ ಕೈಸೇರಲಿದೆ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.