ಮಂಗಳೂರು, ಮಾ. 14 (Daijiworld News/MB) : ಮಂಗಳೂರಿನಲ್ಲಿ ಕೊರೊನ ಬೀತಿ ಹಿನ್ನಲೆಯಲ್ಲಿ ಇಂದಿನಿಂದ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ಬದಿ ತಿಂಡಿ ತಿನಿಸು ವ್ಯಾಪಾರವನ್ನು ಸ್ಥಗಿತಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಆದೇಶಿಸಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯದ ಹಾಗೂ ಸ್ವಚ್ಛತೆಯ ಹಿತ ದೃಷ್ಟಿಯಿಂದ ಎಲ್ಲಾ ರೀತಿಯ ಬೀದಿ ಬದಿ ತಿಂಡಿ ತಿನಿಸು ವ್ಯಾಪಾರವನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು. ತಪ್ಪಿದ್ದಲ್ಲಿ ಸೋಮವಾರದಿಂದ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ಈಗಾಗಲೇ ಕೊರೊನಾ ವೈರಸ್ನೊಂದಿಗೆ ಕಾಲರಾ ರೂಗವು ಹರಡುವ ಭೀತಿಯಿದ್ದು ಸಾರ್ವಜನಿಕರು ಆರೋಗ್ಯಕರವಾದ ಸ್ವಚ್ಛ ಆಹಾರವನ್ನು ಸೇವಿಸಬೇಕು ಎಂದು ಆಯುಕ್ತರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.