ಮಂಗಳೂರು, ಮಾ 14( Daijiworld News/MSP): ಜಗತ್ತನ್ನು ಕಾಡುತ್ತಿರುವ ಮಹಾ ಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಜಗತ್ತನ್ನು ಕಾಡುತ್ತಿರುವ ಕೊರೆನೋ ಮಹಾಮಾರಿ ಭಾರತದ ವಿವಿಧ ಕಡೆಗಳಲ್ಲಿ ಹಬ್ಬುತ್ತಿರುವುದು ಆತಂಕ ಉಂಟಾಗಿದೆ. ಇತ್ತೀಚೆಗೆ ಕಲಬುರ್ಗಿಯಲ್ಲಿ ಕೊರೆನೋ ಸೋಂಕಿನಿಂದ ಒಬ್ಬ ಮೃತಪಟ್ಟಿರುವುದೂ ಕೂಡ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದರು.
ದೇಶದಲ್ಲಿ ಉಂಟಾಗಿರುವ ಕೊರೆನೋ ಭೀತಿ ದೂರವಾಗುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲಾ ದೇವಸ್ಥಾನ,ದೈವಸ್ಥಾನ, ಮಠ- ಮಂದಿರ,ಚರ್ಚ್, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆಡಳಿತ ಮಂಡಳಿ ಹಾಗೂ ನಾಗರಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.
ಇಂದು ರಥಬೀದಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಹಾಗೂ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ಈ ಸಂಧರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಬಿಜೆಪಿ ಮುಖಂಡರು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.