ಮಂಗಳೂರು, ಮಾ.15 (Daijiworld News/MB) : ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆಯಿಂದಾಗಿ ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ.
ಕೊರೊನಾ ವೈರಸ್ ರಾಜ್ಯದಲ್ಲಿ ಹಬ್ಬುತ್ತಿರುವ ಹಿನ್ನಲೆಯಿಂದಾಗಿ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಪ್ರವಾಸಿ ತಾಣಗಳ ವೀಕ್ಷಣೆಗೂ ನಿರ್ಬಂಧ ಹೇರಲಾಗಿದ್ದು ಮಂಗಳೂರಿನ ಹೊರವಲಯದಲ್ಲಿರುವ ಪಿಲಿಕುಳ ನಿಸರ್ಗಧಾಮಕ್ಕೂ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.