ಉಡುಪಿ, ಮಾ 16 (DaijiworldNews/SM): ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಶಂಕಿತ ಪ್ರಕರಣ ಪತ್ತೆಯಾಗಿದೆ. ದುಬೈಯಿಂದ ಆಗಮಿಸಿದ್ದ 26 ವರ್ಷದ ಮಹಿಳೆಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರ ಮೇಲೆ ನಿಗಾ ಇರಿಸಲಾಗಿದೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಶಂಕಿತ ಲಕ್ಷಣಗಳು ಕಂಡು ಬಂದಿರುವ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅವರ ಗಂಟಲ ದ್ರವ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿಗೆ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸ್ಪಷ್ಟಗೊಳ್ಳಲಿದೆ.
ಇನ್ನು ಈ ನಡುವೆ ಈ ಹಿಂದೆ ದಾಖಲಾಗಿದ್ದ ಮೂವರು ಶಂಕಿತರಲ್ಲಿ ನೆಗೆಟಿವ್ ಕಂಡು ಬಂದಿದ್ದು, ಇದುವರೆಗೂ ಯಾವುದೇ ವ್ಯಕ್ತಿಯಲ್ಲಿ ಸೋಂಕು ದೃಡಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಜನ ಆತಂಕಗೊಳ್ಳುವ ಅಗತ್ಯತೆ ಇಲ್ಲ.