ಕುಂದಾಪುರ, ಮಾ 16 (DaijiworldNews/SM): ದೇಶದೆಲ್ಲೆಡೆ ಕೊರೋನಾ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಲ್ಲೂರು ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧಾರಿಸಲಾಗಿದೆ. ಮಂಗಳವಾರ ಕೊಲ್ಲೂರು ಉತ್ಸವ ಆಯೋಜನೆ ಗೊಂಡಿದ್ದು, ಉತ್ಸವದಲ್ಲಿ ಕೇವಲ ರಥಾರೋಹಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ದೇವಸ್ಥಾನದಲ್ಲಿ ಯಾವುದೇ ಉತ್ಸವ ನಡೆಸದಿರಲು ನಿರ್ಧಾರ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬದಲಾವಣೆ ಮಾಡಲಾಗಿದೆ.
ಇನ್ನು ಸರಳ ಉತ್ಸವದಲ್ಲಿ ಕೇವಲ ಅರ್ಚಕರು ಮತ್ತು ದೇವಳದ ಸಿಬ್ಬಂದಿಗಳಿಗೆ ಮಾತ್ರ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಧಾರ್ಮಿಕ ವಿಧಿ ವಿಧಾನಗಳಿಗೆ ಮಾತ್ರ ಅವಕಾಶ ನೀಡಲು ತೀರ್ಮಾನ ಮಾಡಲಾಗಿದೆ. ಸಮಾರಂಭವನ್ನು ಸರಳವಾಗಿ ಆಚರಿಸುವ ಹಿನ್ನೆಲೆಯಲ್ಲಿ ಭಕ್ತರು ಸಹಕೋರಿಸುವಂತೆ ದೇವಾಲಯದ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.
ರಾಜ್ಯದೆಲ್ಲೆಡೆ ಕೊರೊನಾ ಆತಂಕವಿದ್ದು, ಈ ಹಿನ್ನೆಲೆ ಸರಕಾರ ಎಲ್ಲಾ ಸಭೆ ಸಮಾರಂಭಗಳನ್ನು ರದ್ದುಗೊಳಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಕೊಲ್ಲೂರು ಉತ್ಸವವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಲ್ಲೂರು ಇಒ ಅರವಿಂದ ಸುತಗುಂಡಿ ಮಾಹಿತಿ ನೀಡಿದ್ದಾರೆ.